ಅಂತರಂಗದ ಮೃದಂಗ ಅಂತು ತೋಂ ತನಾನ ಚಿತ್ತ ತಾಳ ಬಾರಿಸುತಲಿದ್ದು ಝಂ ಝಣಣ ನಾ ನೆನಪು ತಂತಿ ಮೀಟುತಿತ್ತು ತೋಂತನನ ತಾನ ತೋಂತನನ ತಾನ ತೋಂತನನ ತಾನ ನ ಹಲವು ಜನ್ಮದಿಂದ ಬಂದ ಯಾವುದೋನೋ ಧ್ಯಾನ ಏಕನಾದದಂಥದೊಂದು ತಾನದ ವಿತಾನ ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ ಕಲ್ಪದಾದಿಯಲ್ಲಿ ನನ್ನ ನಿನ್ನ ವಿರಹವಾಗಿ ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೆ ಹೋಗಿ ಮರೆವೆಗೊಂದು ಬಿದ್ದೆ ನಾನು ನೆಲದ ಮಣ್ಣು ತಾಗಿ ಕತ್ತಲಲ್ಲಿ ಬೆಳಕು ಮಿಂಚಿ ಪಡೆತಿತೇಳು [...]
Archive for the ‘ನನ್ನ ಮೆಚ್ಚಿನ ಭಾವಗೀತೆಗಳು ..’ Category
ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ನಿತ್ಯಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯೆ ನಿತ್ಯೋತ್ಸವ ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ ಗತಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ ಓಲೆಗರಿಯ ಸಿರಿಗಳಲ್ಲಿ ದೇಗುಲಗಳ ಬಿತ್ತಿಗಳಲಿ ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯೆ ನಿತ್ಯೋತ್ಸವ ಹಲವೆನ್ನದ ಹಿರಿಮೆಯೆ ಕುಲವೆನ್ನದ ಗರಿಮೆಯೆ ಸದ್ವಿಕಾಸ ಶೀಲ ನುಡಿಯ ಲೋಕಾವೃತ ಸೀಮೆಯೆ ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ [...]
ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ ಸೋ ಎಂದು ಶೃತಿ ಹಿಡಿದು ಸುರಿಯುತ್ತಿತ್ತು ಅದಕೆ ಹಿಮ್ಮೇಳವನೆ ಸೂಸಿ ಬಹ ಸುಳಿಗಾಳಿ ತೆಂಗು ಗರಿಗಳ ನಡುವೆ ನುಸುಳುತ್ತಿತ್ತು ಇಳೆ ವೆಣ್ನು ಮೈದೊಳೆದು ಮಕರಂದದರಿಷಿನದಿ ಹೂ ಮುಡಿದು ಮಧುಮಗಳ ಹೋಲುತ್ತಿತ್ತು ಮೂಡಣದಿ ನೇಸರನ ನಗೆಮೊಗದ ಶ್ರೀಕಾಂತಿ ಬಿಳಿಯ ಮೋಡದ ಹಿಂದೆ ಹೊಳೆಯುತ್ತಿತ್ತು ಹುಲ್ಲೆಸಳು ಹೂಕಪಳೆ ಮುತ್ತು ಹನಿಗಳ ಮಿಂಚು ಸೊಡರಿನಲಿ ಆರತಿಯ ಬೆಳಗುತ್ತಿತ್ತು ಕೊರಲುಕ್ಕಿ ಹಾಡುತಿಹ ಚಿಕ್ಕ ಪಕ್ಕಿಯ ಬಳಗ ಶುಭಮಸ್ತು ಶುಭಮಸ್ತು ಎನ್ನುತ್ತಿತ್ತು ತಳಿರ ತೋರಣದಲ್ಲಿ ಬಳ್ಳಿ ಬಾಣಗಳಲ್ಲಿ [...]
ನಾನೇ ವೀಣೆ ನೀನೇ ತಂತಿ ಅವನೇ ವೈಣಿಕ ಮಿಡಿದ ನೆನಲು ರಸದ ಹೊನಲು ಬಿಂದು ಬಿಂದು ಸೇರಿ ಸಿಂಧು ನಾದ ರೂಪಕ ಭುವನವೆಲ್ಲ ಸವಿಯ ಸೊಲ್ಲ ಕವಿಯ ಗಾನ ನನ್ನ ನಿನ್ನ ಹೃದಯ ಮೀನ ಕಲ್ಲಿಜೇನ ಸೊಗದ ಸ್ನಾನ ಅಮೃತ ಪಾನ ತಂತಿ ಇಂಚರದಿ ವಿಪಂಚಿ ರಸ ಪ್ರಳಯಿಸೆ ನನ್ನ ನಿನ್ನ ಜೀವ ಮಾನ ತಾನ ತಾನ ತನನ ತಾನ ಪ್ರಾಣ ಪುಳಕಿಸೆ
ತೊರೆದು ಹೋಗದಿರೊ ಜೋಗಿ ಅಡಿಗೆರಗಿದ ಈ ದೀನಳ ಮರೆತು ಸಾಗುವೆ ಏಕೆ ವಿರಾಗಿ ಪ್ರೇಮ ಹೋಮದ ಪರಿಮಳ ಪಥದಲಿ ಸಲಿಸು ದೀಕ್ಷೆ ಎನಗೆ ನಿನ್ನ ವಿರಹದಲಿ ಒರೆದು ಹೋಗಲು ಸಿದ್ಧಳಿರುವ ನನಗೆ ಹೂಡುವೆ ಗಂಧದ ಚಿತೆಯ ನಡುವೆ ನಿಲುವೆ ನಾನೇ ಉರಿ ಸೋಕಿಸು ಪ್ರಭುವೆ ಚಿತೆಗೆ ಪ್ರೀತಿಯಿಂದ ನೀನೇ ಉರಿದು ಉಳಿವೆನು ಬೂಧಿಯಲಿ ಲೇಪಿಸಿಕೋ ಅದ ಮೈಗೆ ಮೀರಾ ಪ್ರಭು ಗಿರಿಧರನೇ ಜ್ಯೋತಿಯು ಜ್ಯೋತಿಯ ಸೇರಲಿ ಹೀಗೆ
ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು ಕಡಲು ನಿನ್ನದೆ ಹಡಗು ನಿನ್ನದೆ ಮುಳುಗದಿರಲಿ ಬದುಕು ಬೆಟ್ಟವು ನಿನ್ನದೆ ಬಯಲು ನಿನ್ನದೆ ಹಬ್ಬಿನದಲಿ ಪ್ರೀತಿ ನೆಳಲೊ ಬಿಸಿಲೊ ಎಲ್ಲವು ನಿನ್ನದೆ ಇರಲಿ ಏಕ ರೀತಿ ಆಗೊಂದು ಸಿಡಿಲು ಈಗೊಂದು ಮುಗಿಲು ನಿನಗೆ ಅಲಂಕಾರ ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು ನಿನಗೆ ನಮಸ್ಕಾರ ಅಲ್ಲಿ ರಣದುಂದುಭಿ ಇಲ್ಲೊಂದು ವೀಣೆ ನಿನ್ನ ಪ್ರತಿಧ್ವನಿ ಆ ಮಹಾಕಾವ್ಯ ಈ ಭಾವಗೀತೆ ನಿನ್ನ ಪದ ಧ್ವನಿಯೆ
ಎದೆ ತುಂಬಿ ಹಾಡಿದೆನು ಅಂದು ನಾನು ಮನವಿಟ್ಟು ಕೇಳಿದಿರಿ ಅಲ್ಲಿ ನೀವು ಇಂದು ನಾ ಹಾಡಿದರೂ ಅಂದಿನಂತೆಯೆ ಕುಳಿತು ಕೇಳುವಿರಿ ಸಾಕೆನಗೆ ಅದುವೆ ಬಹುಮಾನ ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ ಹಾಡುವುದು ಅನಿವಾರ್ಯ ಕರ್ಮ ನನಗೆ ಕೇಳುವವರಿಹರೆಂದು ನಾ ಬಲ್ಲೆನದರಿಂದ ಹಾಡುವೆನು ಮೈದುಂಬಿ ಎಂದಿನಂತೆ ಯಾರು ಕಿವಿ ಮುಚ್ಚಿದರೂ ನನಗಿಲ್ಲ ಚಿಂತೆ ಎದೆ ತುಂಬಿ ಹಾಡಿದೆನು ಇಂದು ನಾನು ಮನವಿಟ್ಟು ಕೇಳಿದಿರಿ ಇಲ್ಲಿ ನೀವು..
ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧ ದಾಟಿ ಬಂತು ಬೇಲಿಸಾಲ ಮೀಟಿ ಹಳೆಯ ಮಧುರ ನೋವ ಬಾನಿನಲ್ಲಿ ಒಂಟಿ ತಾರೆ ಸೋನೆ ಸುರಿವ ಇರುಳ ಮೋರೆ ಕತ್ತಲಲ್ಲಿ ಕುಳಿತು ಒಳಗೆ ಬಿಕ್ಕುತಿಹಳು ಯಾರೋ ನೀರೆ ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮ ಜಲದ ಕಂಪೋ ಬಂದು ಚೀರುವೆದೆಯ ಭಾವ ಹೇಳಲಾರೆ ತಾಳಲಾರೆ
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನ್ನು..
Posted: May 7, 2010 in ನನ್ನ ಮೆಚ್ಚಿನ ಭಾವಗೀತೆಗಳು .., ಹಾಗೆ ಸುಮ್ಮನೆ..ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನ್ನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ಹೂವು ಹಾಸಿಗೆ ಚಂದ್ರ ಚಂದನ ಬಾಹುಬಂಧನ ಚುಂಬನ ಬಯಕೆ ತೋಟದ ಬೇಲಿಯೊಳಗೆ ಕರಣ ಕಣದಿ ರಿಂಗಣ ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ ಒಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೇ ವಿವಶವಾಯಿತು ಪ್ರಾಣ ಪರವಶವು ನಿನ್ನೀ ಚೇತನ ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತೊಡೆವುದೇ ಜೀವನ ಯಾವ ಮೋಹನ ಮುರಳಿ ಕರೆಯಿತು ಇದ್ದಕ್ಕಿದ್ದೆಡೆ ನಿನ್ನನ್ನು ಯಾವ ಬೃಂದಾವನವು ಚಾಚಿತು [...]
ನೀನಿಲ್ಲದೆ ನನಗೇನಿದೆ ಮನಸೆಲ್ಲಾ ನಿನ್ನಲ್ಲೆ ನೆಲೆಯಾಗಿದೆ ಕನಸೆಲ್ಲಾ ಕಣ್ಣಲ್ಲೆ ಸೆಲೆಯಾಗಿದೆ ನಿನಗಾಗಿ ಕಾದು ಕಾದು ಪರಿತಪಿಸಿ ನೊಂದೆ ನಾನು ಕಹಿಯಾದ ವಿರಹದ ನೋವು ಹಗಲಿರುಳು ತಂದೆ ನೀನು ಎದೆಯಾಸೆ ಏನು ಎಂದು ನೀ ಕಾಣದಾದೆ ನಿಶೆಯೊಂದೆ ನನ್ನಲ್ಲಿ ನೀ ತುಂಬಿದೆ ಬೆಳಕೊಂದೆ ನಿನ್ನಿಂದ ನಾ ಬಯಸಿದೆ ಒಲವೆಂಬ ಕಿರಣ ಬೀರಿ ಒಳಗಿರುವ ಬಣ್ಣ ತೆರೆಸಿ ಒಳಗಿರುವ ಎದೆ ನೆಲದಲ್ಲಿ ಭರವಸೆಯ ಜೀವ ಹರಿಸಿ ಸೆರೆಯಿಂದ ಬಿಡಿಸಿ ನನ್ನ ಆತಂಕ ನೀಗು ಹೊಸ ಜೀವ ನಿನ್ನಿಂದ ನಾ ತಾಳುವೆ [...]